ಹಾಕಿ ಕೊಡವರ ಜನಪ್ರಿಯ ಕ್ರೀಡೆಯಾಗಿದ್ದು, ಕೊಡಗಿನಲ್ಲಿ ಪ್ರತಿ ರ‍್ಷ ಕುಂಡ್ಯೋಳಂಡ ಕೊಡವ ಕುಟುಂಬದ ವತಿಯಿಂದ ನಡೆಯುವ ಈ ಪಂದ್ಯಾವಳಿ ವಿಶ್ವ ದಾಖಲೆಯಾಗಿ ಗಿನ್ನಿಸ್ ಬುಕ್ ಆಫ್ ರೆಕರ‍್ಡ್ಸ್ನಲ್ಲಿ ದಾಖಲಾಗಿರುವುದು ಹೆಮ್ಮೆಯ ವಿಷಯ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.ಗುರುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಪಂದ್ಯಾವಳಿ ಸಂಘಟಿಸಲು ಕುಂಡ್ಯೋಳಂಡ ಕೊಡವ ಕುಟುಂಬಕ್ಕೆ ೧ ಕೋಟಿ ರೂಪಾಯಿಗಳ ಚೆಕ್ ಅನ್ನು ಯುವ ಸಬಲೀಕರಣ ಇಲಾಖೆ ವತಿಯಿಂದ ವಿತರಿಸಿ ಮಾತನಾಡಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಹಾಕಿ ಹುಟ್ಟಿದ್ದು ಭಾರತ ದೇಶದಲ್ಲಿ.ಧ್ಯಾನಚಂದ್ ಅವರಂತಹ ಹಾಕಿ ಮಾಂತ್ರಿಕ ಹುಟ್ಟಿದ ದೇಶ ನಮ್ಮದು. ಕ್ರಿಕೆಟ್ ಅಷ್ಟೇ ಅಲ್ಲ, ಹಾಕಿ ಯಾರೂ ಅತ್ಯಂತ ಜನಪ್ರಿಯ ಕ್ರೀಡೆಯಾಗಿದ್ದು ಮುಂದಿನ ದಿನಗಳಲ್ಲಿಯೂ ಈ ಪರಂಪರೆ ಮುಂದುವರೆಸಿಕೊಂಡು ಹೋಗಿ ಎಂದು ಹಾರೈಸಿದರು.