ಇಂದು ಬೆಳ್ಳಂಬೆಳಗ್ಗೆ ಭ್ರಷ್ಟರಿಗೆ ಲೋಕಾಯುಕ್ತ ಅಧಿಕಾರಿಗಳು ಶಾಕ್ ಕೊಟ್ಟಿದ್ದಾರೆ. ರಾಜ್ಯದಲ್ಲಿ ಬೆಂಗಳೂರು ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳಲ್ಲಿ ಲೋಕಾಯುಕ್ತ ದಾಳಿ ನಡೆದಿದೆ. ಸಾರಿಗೆ, ಬೆಸ್ಕಾಂ, ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳ ಮೇಲೆ ಅಕ್ರಮ ಆಸ್ತಿ ಗಳಿಕೆ ಆರೋಪ ಕೇಳಿ ಬಂದ ಬೆನ್ನಲ್ಲೆ ಲೋಕಾಯುಕ್ತ ಅಧಿಕಾರಿಗಳು ಇಂದು ಭ್ರಷ್ಟರ ಮನೆ ಬಾಗಿಲು ತಟ್ಟಿದ್ದಾರೆ. ಬೆಂಗಳೂರು, ಗದಗ, ಬಳ್ಳಾರಿ ಸೇರಿದಂತೆ ಒಟ್ಟು ಎಂಟು ಜಿಲ್ಲೆಗಳಲ್ಲಿ ಪರೀಶಿಲನೆ ನಡೆದಿದೆ.