ಟೀಮ್ ಇಂಡಿಯಾ ಆಟಗಾರರು ಪದೇ ಪದೇ ಫಿಟ್ನೆಸ್ ಸಮಸ್ಯೆಗೆ ಒಳಗಾಗುತ್ತಿದ್ದಾರೆ. ಇದಕ್ಕೆ ಬ್ರೇಕ್ ಹಾಕಲು ಇದೀಗ ಬಿಸಿಸಿಐ ಹಳೆಯ ನಿಯಮಗಳನ್ನು ಜಾರಿಗೊಳಿಸಲು ಮುಂದಾಗಿದೆ. ಈ ನಿಯಮದ ಪ್ರಕಾರ ಭಾರತ ತಂಡದಲ್ಲಿ ಸ್ಥಾನ ಪಡೆಯಬೇಕಿದ್ದರೆ ಫಿಟ್ನೆಸ್ ಟೆಸ್ಟ್ ಪಾಸಾಗಲೇಬೇಕು. ಒಂದು ವೇಳೆ ಫಿಟ್ನೆಸ್ ಟೆಸ್ಟ್ನಲ್ಲಿ ಫೇಲ್ ಆದರೆ ತಂಡದಿಂದ ಹೊರಬೀಳಲಿದ್ದಾರೆ.