ಬಾಲಿವುಡ್ ಬ್ಯೂಟಿ ಪ್ರಿಯಾಂಕಾ ಚೋಪ್ರಾ ಮದುವೆ ಬಳಿಕ ಪತಿ ನಿಕ್ ಜೋನಸ್ ಜೊತೆ ಅಮೆರಿಕಾದಲ್ಲಿ ನೆಲೆಸಿದ್ದಾರೆ. ಕಳೆದ ಎರಡು ಮೂರು ದಿನಗಳಿಂದ ಪಿಗ್ಗಿ ಹೈದರಾಬಾದ್ನಲ್ಲಿ ಕಾಣಿಸಿಕೊಂಡಿದ್ದಾರೆ. ತೆಲುಗು ಚಿತ್ರದಲ್ಲಿ ನಟಿಸಲು ಆಕೆ ಭಾರತಕ್ಕೆ ಬಂದಿದ್ದಾರೆ ಎನ್ನಲಾಗ್ತಿದೆ. ಸದ್ಯ ಆಕೆ ಹೈದರಾಬಾದ್ನ ಚಿಲ್ಕೂರು ಬಾಲಾಜಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.
ರಾಜಮೌಳಿ ನಿರ್ದೇಶನದ ಮುಂದಿನ ಚಿತ್ರದಲ್ಲಿ ತೆಲುಗು ಮಹೇಶ್ ಬಾಬು ಹೀರೊ ಆಗಿ ನಟಿಸುತ್ತಿದ್ದಾರೆ. ಹೊಸ ವರ್ಷದ ಆರಂಭದಲ್ಲೇ ಚಿತ್ರದ ಮುಹೂರ್ತ ನಡೆದಿದೆ ಎನ್ನಲಾಗಿತ್ತು. ಆದರೆ ಅಧಿಕೃತವಾಗಿ ಈ ಬಗ್ಗೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಇದೇ ಚಿತ್ರದಲ್ಲಿ ಪ್ರಿಯಾಂಕ ಚೋಪ್ರಾ ನಾಯಕಿಯಾಗಿ ನಟಿಸುತ್ತಾರೆ ಎನ್ನುವ ಮಾತುಗಳು ಕೇಳಿಬರ್ತಿದೆ. ಇದೇ ಕಾರಣಕ್ಕೆ ಆಕೆ ಹೈದರಾಬಾದ್ಗೆ ಬಂದಿಳಿದ್ದಾರೆ ಎನ್ನುವ ಊಹಾಪೋಹ ಶುರುವಾಗಿದೆ