ಅರಬ್ಬರ ನಾಡು ಕತಾರ್‌ನಲ್ಲಿ ಕಳೆದ ವರ್ಷ ಮುಗಿದಿದ್ದ 2022ರ ಫಿಫಾ ವಿಶ್ವಕಪ್ ಫುಟ್ಬಾಲ್ ಟೂರ್ನಿಯಲ್ಲಿ ಲಿಯೊನೆಲ್ ಮೆಸ್ಸಿ ನಾಯಕತ್ವದ ಅರ್ಜೆಂಟೀನಾ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತ್ತು. ಇದೀಗ ವಿಶ್ವದ ಶ್ರೇಷ್ಠ ಫುಟ್ಬಾಲ್ ಆಟಗಾರ ಲಿಯೊನೆಲ್ ನಿವೃತ್ತಿಯ ಬಗ್ಗೆ ದೊಡ್ಡ ಸುಳಿವು ನೀಡಿ ಅಚ್ಚರಿ ಮೂಡಿಸಿದ್ದಾರೆ.