೫ ಗ್ಯಾರಂಟಿ ಯೋಜನೆಗಳು ಯಶಸ್ವಿ ಜಾರಿ:ರಾಜ್ಯಪಾಲ

Spread the love

ರಾಜ್ಯದಲ್ಲಿ ೫ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡಿದ್ದು, ಈ ಗ್ಯಾರಂಟಿ ಯೋಜನೆಗಳಿಂದಾಗಿ ಆರ್ಥಿಕ ಬಿಕ್ಕಟ್ಟು ಉಂಟಾದೀತು. ಅಭಿವೃದ್ಧಿ ಕುಂಠಿತವಾದೀತು ನಿರಾಶವಾಗಿದೆ ಎಂಬ ಭವಿಷ್ಯ ಸುಳ್ಳಾಗಿದೆ ಎಂದು ರಾಜ್ಯಪಾಲ ಥಾವರ್‌ಚಂದ್‌ಗೆಲ್ಹೋಟ್ ಹೇಳಿದರು.

ದೇಶದ ೭೬ನೇ ಗಣರಾಜ್ಯೋತ್ಸವದ ಅಂಗವಾಗಿ ಬೆಂಗಳೂರಿನ ಫೀಲ್ಡ್‌ಮಾರ್ಷಲ್ ಮಾಣಿಕ್ ಶಾ ಮೈದಾನದಲ್ಲಿಂದು ರಾಷ್ಟ್ರ ಧ್ವಜಾರೋಹಣ ನೆರವೇರಿಸಿ ಮಾತನಾಡಿದ ಅವರು, ಕರ್ನಾಟಕ ಆರ್ಥಿಕ ಬೆಳವಣಿಗೆ ಮತ್ತು ಸಾಮಾಜಿಕ ನ್ಯಾಯ ಎರಡನ್ನೂ ಸಮನಾಗಿ ನಿಭಾಯಿಸುತ್ತ ದೇಶದಲ್ಲೇ ಅತ್ಯುತ್ತಮ ಅಭಿವೃದ್ಧಿ ಸಾಧಿಸುತ್ತಿರುವ ರಾಜ್ಯಗಳ ಪೈಕಿ ಒಂದು ಎಂದು ರಾಜ್ಯಪಾಲ ಥಾವರ್‌ಚಂದ್‌ಗೆಲ್ಹೋಟ್ ಹೇಳಿದರು.

ಸಂವಿಧಾನದ ಮಹತ್ತರ ಆಶಯವಾದ ಸಾಮಾಜಿಕ ಮತ್ತು ಆರ್ಥಿಕ ನ್ಯಾಯವನ್ನು ನೆಲೆಗೊಳಿಸಲು ಶಕ್ತಿಮೀರಿ ಶ್ರಮಿಸುತ್ತಿದೆ. ದೇಶದಲ್ಲಿ ಹೆಚ್ಚುತ್ತಿರುವ ಆರ್ಥಿಕ ಅಸಮಾನತೆಯಿಂದ ಸಾಮಾಜಿಕ ಮತ್ತು ಆರ್ಥಿಕ ನ್ಯಾಯಗಳಿಗೆ ಆಗುತ್ತಿರುವ ಹಿನ್ನಡೆಯನ್ನು ಮತ್ತು ಜನರಿಗೆ ಆಗುತ್ತಿರುವ ಸಂಕಷ್ಟಗಳನ್ನು ಅರಿತುಕೊಂಡು ರಾಜ್ಯಸರ್ಕಾರ ಜಾರಿಗೆ ತಂದ ೫ ಗ್ಯಾರಂಟಿ ಯೋಜನೆಗಳು ಯಶಸ್ವಿಯಾಗಿ ಜಾರಿಗೊಂಡು ದೇಶದ ಗಮನ ಸೆಳೆದಿದೆ ಎಂದು ಅವರು ಹೇಳಿದರು.

error: Content is protected !!