ರ‍್ನಾಟಕದ ಶಾಲಾ ಶಿಕ್ಷಣ ಇಲಾಖೆ ಪ್ರಾಥಮಿಕ ಶಾಲಾ ಶಿಕ್ಷಕರ ಮುಂಬಡ್ತಿ ವಿಚಾರದಲ್ಲಿ ಮಹತ್ವದ ಆದೇಶವನ್ನು ಹೊರಡಿಸಿದೆ. ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್‌ಲಾಗ್) ಹುದ್ದೆಗಳನ್ನು ಗುರುತಿಸುವ ಕುರಿತು ರ‍್ಕಾರ ಆದೇಶವನ್ನು ಹೊರಡಿಸಿದೆ.
ಈ ಕುರಿತು ಆಯುಕ್ತರು ಶಾಲಾ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದ್ದಾರೆ. ಈ ಆದೇಶ ರ‍್ಕಾರಿ ಪ್ರೌಢಶಾಲಾ ಶಿಕ್ಷಕರ ನೇರ ನೇಮಕಾತಿ ಮತ್ತು ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರೌಢಶಾಲಾ ಸಹ ಶಿಕ್ಷಕರ ಹುದ್ದೆಗೆ ಮುಂಬಡ್ತಿ ನೀಡುವ ಸಮಯದಲ್ಲಿ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಹಿಂಬಾಕಿ (ಬ್ಯಾಕ್ ಲಾಗ್) ಹುದ್ದೆಗಳನ್ನು ಗುರುತಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.
ಮಾನ್ಯ ಕರ‍್ಯರ‍್ಶಿಗಳು, ರ‍್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಬೆಂಗಳೂರು ಇವರ ಪತ್ರ ದಿನಾಂಕ ೦೯-೦೧-೨೦೨೫, ದಿನಾಂಕ ೧೬.೦೧.೨೦೨೫ರಂದು ರ‍್ನಾಟಕ ರಾಜ್ಯ ಅನುಸೂಚಿತ ಜಾತಿಗಳು ಮತ್ತು ಅನುಸೂಚಿತ ಬುಡಕಟ್ಟುಗಳ ಆಯೋಗ ಬೆಂಗಳೂರು, ಇಲ್ಲಿ ನಡೆದ ಸಭೆಯ ನಡಾವಳಿಗಳನ್ನು ಉಲ್ಲೇಖಿಸಲಾಗಿದೆ.