ಸಾಲಗಾರರಿಗೆ ಮೈಕ್ರೋಫೈನಾನ್ಸ್ ನೀಡುತ್ತಿರುವ ಕಿರುಕುಳ ತಪ್ಪಿಸಲು ರಾಜ್ಯ ರ‍್ಕಾರದ ಸುಗ್ರಿವಾಜ್ಞೆಗೆ ರಾಜ್ಯಪಾಲರು ಇಂದು ಅಂಕಿತ ಹಾಕಿದ್ದಾರೆ.
ಈ ಬಗ್ಗೆ ಕೆಲವೊಂದು ಸಲಹೆಗಳನ್ನು ನೀಡಿರುವ ರಾಜ್ಯಪಾಲರು, ವಿಧಾನ ಮಂಡಲ ಅಧಿವೇಶನದಲ್ಲಿ ರ‍್ಚಿಸುವಂತೆ ಸೂಚಿಸಿದ್ದಾರೆ.
ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಅಂಕುಶ ಹಾಕಲು ರ‍್ಕಾರ ಸುಗ್ರೀವಾಜ್ಞೆ ಮೊರೆ ಹೋಗಿತ್ತು. ಕಠಿಣ ಕಾನೂನು ರೂಪಿಸಿ ರಾಜ್ಯಪಾಲರಿಗೆ ರವಾನಿಸಿದ್ದರು.
ಬಜೆಟ್ ಅಧಿವೇಶನದಲ್ಲಿ ಮೈಕ್ರೋ ಫೈನಾನ್ಸ್ ಸುಗ್ರೀವಾಜ್ಞೆ ಸಾಧಕ ಬಾಧಕದ ಬಗ್ಗೆ ರ‍್ಚೆ ನಡೆಸುವಂತೆ ಹೇಳಿದ್ದ ರಾಜ್ಯಪಾಲರು, ಈಗಿರುವ ಕಾನೂನುಗಳಲ್ಲೇ ಪೊಲೀಸರು ಸರಿಯಾದ ಕ್ರಮಕೈಗೊಳ್ಳುತ್ತಿಲ್ಲ ಎಂದು ಪೊಲೀಸ್ ವ್ಯವಸ್ಥೆ ಬಗ್ಗೆಯೂ ಅಸಮಾಧನ ಹೊರಹಾಕಿದ್ದರು. ಮೈಕ್ರೋ ಫೈನಾನ್ಸ್ ವಿರುದ್ಧ ಮತ್ತೊಂದು ಕಾನೂನಿನ ಅಗತ್ಯತೆ ಕಾಣುತ್ತಿಲ್ಲ ಖಡಕ್ ಸಂದೇಶ ರವಾನಿಸಿ ಸುಗ್ರೀವಾಜ್ಞೆ ವಾಪಸ್ ಮಾಡಲಾಗಿತ್ತು.
ಮೈಕ್ರೋ ಫೈನಾನ್ಸ್ ಕಂಪೆನಿಗಳು ಸಾಲ ವಸೂಲಿಯ ನೆಪದಲ್ಲಿ ಸಾಲ ಪಡೆದವರಿಗೆ ನೀಡುತ್ತಿರುವ ಕಿರುಕುಳವನ್ನು ತಡೆಯಲು ರೂಪಿಸಲಾದ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ ದೊರೆತಿದೆ ಎಂದು ಮುಖ್ಯಮಂತ್ರಿ ಟ್ವೀಟ್ ಮಾಡಿದ್ದಾರೆ.