ಬಹು ನಿರೀಕ್ಷಿತ ಐಸಿಸಿ ಚಾಂಪಿಯನ್ಸ್ ಟ್ರೋಫಿ ವೇಳಾಪಟ್ಟಿ ಇಂದು ಪ್ರಕಟಿಸಲಾಗಿದೆ. ಫೆ.೧೯ರಿಂದ ಪಂದ್ಯಗಳು ಆರಂಭವಾಗಲಿದ್ದು, ಫೆ.೨೩ ಸಾಂಪ್ರದಾಯಿಕ ಎದುರಾಳಿ ಭಾರತ ಮತ್ತು ಪಾಕಿಸ್ತಾನ ತಂಡಗಳ ನಡುವೆ ಹೈವೋಲ್ಟೇಜ್ ಪಂದ್ಯ ನಡೆಯಲಿದೆ. ಪಾಕ್ ಆತಿಥ್ಯದಲ್ಲಿ ನಡೆಯಲಿರುವ ಈ ಟರ‍್ನಿ ಕರಾಚಿಯಲ್ಲಿ ಮೊದಲ ಪಂದ್ಯ ನಡೆಯಲಿದ್ದು, ಮಾ.೯ ಫೈನಲ್ ಪಂದ್ಯ ನಡೆಯಲಿದೆ.
ಭಾರತ ಆಡುವ ಎಲ್ಲಾ ಪಂದ್ಯಗಳು ದುಬೈನಲ್ಲಿ ನಡೆಯಲಿವೆ. ಹೈ ಬ್ರಿಡ್ ಮಾದರಿಯಲ್ಲಿ ನಡೆಯಲಿರುವ ಈ ಟರ‍್ನಿಯಲ್ಲಿ ಎಂಟು ತಂಡಗಳು ಸೆಣಸಲಿವೆ. ಹೀಗಾಗಿ ಎರಡು ಗುಂಪುಗಳನ್ನಾಗಿ ವಿಂಗಡಿಸಲಾಗಿದೆ.