ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ಅಂದಾಜು ೪೦ ಲಕ್ಷ ರೂ ಮೊತ್ತದ ಗಾಂಜಾ ವಶಪಡಿಸಿಕೊಂಡು ಇಬ್ಬರನ್ನು ಬಂಧಿಸಲಾಗಿದೆ.ಸಾಗಾಟಕ್ಕೆ ಬಳಸಿದ ೫ ಲಕ್ಷ ರೂ ಮೊತ್ತದ ಕಾರು ಮತ್ತು ೫೦ ಸಾವಿರ ಮೌಲ್ಯದ ಬೈಕ್ ವಶಪಡಿಸಿಕೊಳ್ಳಲಾಗಿದೆ ಎಂದು ಜಿಲ್ಲಾ ಎಸ್ಪಿ ಅಡ್ಡೂರು ಶ್ರೀನಿವಾಸಲು ಅವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಕಾಳಗಿ ಪೆÇಲೀಸ್ ಠಾಣಾ ವ್ಯಾಪ್ತಿಯ ಕಾಳಗಿ ಕೂಡ್ಲಿ ಮುಖ್ಯ ರಸ್ತೆಗೆ ಹೊಂದಿಕೊಂಡಿರುವ ಲಕ್ಷ್ಮಣ ನಾಯಕ ತಾಂಡಾದ ಹತ್ತಿರ ಕಾರಿನಲ್ಲಿ ಗಾಂಜಾ ಸಾಗಾಟ ಮಾಡುತ್ತಿರುವ ಬಗ್ಗೆ ಖಚಿತ ಮಾಹಿತಿ ಬಂದ ಮೇರೆಗೆ ಕಾಳಗಿ ಪೆÇಲೀಸ್ ಠಾಣೆ ಅಧಿಕಾರಿಗಳು ಮತ್ತು ಸಿಬ್ಬಂದಿಯವರು ಸ್ಥಳಕ್ಕೆ ಧಾವಿಸಿ ಲಕ್ಷ್ಮಣ ನಾಯಕ ತಾಂಡಾದ ಚಂದ್ರಕಾಂತ ರ‍್ಫ ಪಪ್ಪು ಹರಿಶ್ಚಂದ್ರ ಚವ್ಹಾಣ (೪೦) ಮತ್ತು ಕೋಡ್ಲಿಯ ಮಲ್ಲಯ್ಯ ಮಹಾಬಳೇಶ್ವರ ಪ್ಯಾಟೀಮನಿ ಎಂಬುವವರನ್ನು ವಶಕ್ಕೆ ಪಡೆಯಲಾಗಿದೆ.ಇವರಿಬ್ಬರು ೧೮ ಪ್ಯಾಕೆಟುಗಳಲ್ಲಿ ತುಂಬಿದ ಒಟ್ಟು ೪೦ ಕೆ.ಜಿ ಗಾಂಜಾ ಅಕ್ರಮವಾಗಿ ಸಾಗಿಸುತ್ತಿದ್ದರು. ಈ ನಿಮಿತ್ಯ ಕಾಳಗಿ ಪೆÇಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ ಎಂದರು.
ಕಲಬುರಗಿ ಜಿಲ್ಲೆಯಲ್ಲಿ ಅಕ್ರಮ ಗಾಂಜಾ ಮತ್ತು ಮಾದಕ ವಸ್ತುಗಳ ಮಾರಾಟ ಮತ್ತು ಸಾಗಾಣಿಕೆ ಪತ್ತೆ ಕುರಿತು ಹೆಚ್ಚುವರಿ ಎಸ್ಪಿ ಮಹೇಶ ಮೇಘಣ್ಣನವರ,ಶಹಾಬಾದ ಉಪ-ವಿಭಾಗದ ಡಿಎಸ್ಪಿ ಶಂಕರಗೌಡ ಪಾಟೀಲ್ ಅವರ ಮರ‍್ಗರ‍್ಶನದಲ್ಲಿ ಚಿತ್ತಾಪುರ ಸಿಪಿಐ ಚಂದ್ರಶೇಖರ ತಿಗಡಿ, ಕಾಳಗಿ ಪಿ.ಎಸ್.ಐ ತಿಮ್ಮಯ್ಯ ಕಾಳಗಿ ಪೆÇಲೀಸ್ ಠಾಣೆಯ ಸಿಬ್ಬಂದಿಯವರಾದ ಹುಸೇನ, ನಸಿರಮೀಯಾ, ಸಂಗಮೇಶ,ಅಂಬರೀಶ,ಬಸಪ್ಪ,ಶಿವರಾಜ,ಶ್ರೀಶೈಲ, ಮಾರುತಿ, ಮಂಜು, ಮೌನೇಶ ಅವರನ್ನೊಳಗೊಂಡ ಒಂದು ತಂಡ ರಚಿಸಲಾಗಿತ್ತು ಎಂದು ಮಾಹಿತಿ ನೀಡಿದರು.