ಬಾಯಿ ಆರೋಗ್ಯ ಕಾಳಜಿ ವಹಿಸಿ: ಡಿಹೆಚ್‌ಓ

Spread the love
ಬಾಯಿ ಆರೋಗ್ಯ ಸಂಬAಧಿಸಿದ ಆರೋಗ್ಯ ಸಮಸ್ಯೆಗಳಿಗೆ ಎಲ್ಲಾ ಸರ್ಕಾರಿ ಅರೋಗ್ಯ ಕೇಂದ್ರಗಳಲ್ಲಿ ಉಚಿತ ಚಿಕಿತ್ಸಾ ಸೌಲಭ್ಯವಿದ್ದು, ಸಾರ್ವಜನಿಕರು ಸದುಪಯೋಗ ಪಡೆದುಕೊಳ್ಳಬೇಕು ಎಂದು ಜಿಲ್ಲಾ ಆ
ರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಯಲ್ಲಾ ರಮೇಶಬಾಬು ಅವರು ಹೇಳಿದರು.
ರಾಷ್ಟಿçÃಯ ಬಾಯಿ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳ ಕಾರ್ಯಾಲಯದ ಸಭಾಂಗಣದಲ್ಲಿ ವೈದ್ಯಾಧಿಕಾರಿಗಳು ದಂತ ವೈದ್ಯರಿಗೆ ಶುಕ್ರವಾರ ಏರ್ಪಡಿಸಿದ್ದ ಮಾಹಿತಿ ಕಾರ್ಯಾಗಾರದಲ್ಲಿ ಭಾಗವಹಿಸಿ ಅವರು ಮಾತನಾಡಿದರು. ಮನುಷ್ಯನ ದೇಹದ ಅಂಗಗಳಲ್ಲಿ ಬಾಯಿಯು ಸೂಕ್ಷö್ಮ ಮಹತ್ವ ಹೊಂದಿದ್ದು, ಸಾರ್ವಜನಿಕರಿಗೆ ಹೆಚ್ಚಿನ ಜಾಗೃತಿಯ ಮೂಲಕ ಆರೋಗ್ಯಕರ ಬಾಯಿ ಕಾಪಾಡಿಕೊಳ್ಳುವಂತೆ ತಿಳಿಸುವ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ ಎಂದು ತಿಳಿಸಿದರು. ಜಿಲ್ಲೆಯಾದ್ಯಂತ ಪ್ರತಿ ಮಂಗಳವಾರ ದಂತ ವೈದ್ಯ ಮಹಾವಿದ್ಯಾಲಯದ ಸಹಯೋಗದಲ್ಲಿ ಒಂದು ಆರೋಗ್ಯ ಕೇಂದ್ರದAತೆ ಉಚಿತ ಶಿಬಿರ ಹಮ್ಮಿಕೊಳ್ಳುವ ಕುರಿತು ಸಿದ್ದತೆ ಮಾಡಿಕೊಳ್ಳಲಾಗುತ್ತಿದ್ದು, ಪ್ರತಿಯೊಬ್ಬ ಅರ್ಹ ನಾಗರಿಕರು ಇದರ ಸದುಪಯೋಗ ಪಡೆದುಕೊಳ್ಳುವಂತೆ ವ್ಯಾಪಕ ಪ್ರಚಾರ ಕೈಗೊಳ್ಳಬೇಕು ಎಂದು ಸೂಚಿಸಿದರು.
error: Content is protected !!