ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಕಾರಿಗೆ ಢಿಕ್ಕಿ

Spread the love

ಚಿಕ್ಕಮಗಳೂರು ತಾಲೂಕಿನ ಲಕ್ಯಾ ಕ್ರಾಸ್ ಬಳಿ ಈ ಅಪಘಾತ ಸಂಭವಿಸಿದ್ದು, ಶುಕ್ರವಾರ ಬಸವ ತತ್ವ ಕರ‍್ಯಕ್ರಮ ಮುಗಿಸಿ ವಾಪಸ್ ಚಿಕ್ಕಮಗಳೂರು ನಗರದಿಂದ ಶಿವಮೊಗ್ಗಕ್ಕೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎನ್ನಲಾಗಿದೆ. ಲಾರಿ ಢಿಕ್ಕಿ ಹೊಡೆದ ರಭಸಕ್ಕೆ ಕಾರಿನ ಹಿಂಭಾಗ ಸಂಪರ‍್ಣ ನಜ್ಜುಗುಜ್ಜಾಗಿದೆ.
ಇನ್ನು ಅಪಘಾತದಲ್ಲಿ ಅದೃಷ್ಟವಶಾತ್​ವಿಜಯೇಂದ್ರ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ವಿಜಯೇಂದ್ರ ಅವರು ಬೇರೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರಿಂದ ಅವರು ಅಪಘಾತದಿಂದ ಆಗಿದ್ದಾರೆ. ಅಂತೆಯೇ ಅಪಘಾತಕ್ಕೀಡಾದ ವಿಜಯೇಂದ್ರಗೆ ಸೇರಿದ ಕಾರಿನ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಹೊರ ಜಿಲ್ಲೆಗಳಿಗೆ ತೆರಳುವಾಗ ವಿಜಯೇಂದ್ರ ಅವರು ಇದೇ ಕಾರನ್ನು ಬಳಸುತ್ತಿದ್ದರು. ಆದರೆ, ಅದೃಷ್ಟವಶಾತ್ ಇಂದು ಮತ್ತೊಂದು ಕಾರಿನಲ್ಲಿ ಪ್ರಯಾಣಿಸುತ್ತಿದ್ದರು ಎಂದು ತಿಳಿದುಬಂದಿದೆ.

error: Content is protected !!