ತಿರುಪತಿ ಕಾಲ್ತುಳಿತ: ಬಳ್ಳಾರಿ ಮೂಲದ ಮಹಿಳೆ ಸಾವು

Spread the love

ಆಂಧ್ರ ಪ್ರದೇಶದ ತಿರುಪತಿ ತಿರುಮಲ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಬುಧವಾರ ರಾತ್ರಿ ಸಂಭವಿಸಿದ ಕಾಲ್ತುಳಿತದಲ್ಲಿ ಮೃತಪಟ್ಟ 7 ಮಂದಿಯ ಪೈಕಿ ಓರ್ವರನ್ನು ಬಳ್ಳಾರಿ ಮೂಲದ ಮಹಿಳೆ ಎಂದು ಗುರ್ತಿಸಲಾಗಿದೆ.

   ಮೃತರನ್ನು ಬಳ್ಳಾರಿ ಮೂಲದ ನಿರ್ಮಲಾ (50) ಎಂದು ಗುರುತಿಸಲಾಗಿದೆ. ಉಳಿದ 6 ಮಂದಿ ಮೃತರನ್ನು ವೈಜಾಗ್‌ನ ರಜನಿ (47), ವೈಜಾಗ್‌ನ ಲಾವಣ್ಯ (40), ವೈಜಾಗ್‌ನ ಶಾಂತಿ (30), ಸೇಲಂನ ಮಲ್ಲಿಕಾ (49) ಹಾಗೂ ನರಸಿಪಟ್ಟಣದ ನಾಯ್ಡು ಬಾಬು (59) ಎಂದು ಗುರುತಿಸಲಾಗಿದೆ. ದುರ್ಘಟನೆಯಲ್ಲಿ 60ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿದ್ದು, ಗಾಯಾಳುಗಳಿಗೆ ಚಿಕಿತ್ಸೆ ಮುಂದುವರದಿದೆ,

   ಗುರುವಾರ (ಜ.8) ಬೆಳಗ್ಗೆ 5 ಗಂಟೆಯಿಂದ ಶ್ರೀನಿವಾಸಂ, ಸತ್ಯನಾರಾಯಣಪುರಂ ಮತ್ತು ಬೈರಾಗಿಪಟ್ಟೆಡ ಸೇರಿದಂತೆ 9 ಪ್ರದೇಶಗಳಲ್ಲಿ ಸ್ಥಾಪಿಸಲಾಗಿರುವ 94 ಕೌಂಟರ್‌ಗಳ ಮೂಲಕ ವೈಕುಂಠ ದ್ವಾರ ದರ್ಶನ ಟಿಕೆಟ್‌ ನೀಡಲು ಟಿಟಿಡಿ ಯೋಜಿಸಿತ್ತು. ಆದರೆ, ಟೋಕನ್‌ಗಳಿಗಾಗಿ ಬುಧವಾರ ಸಂಜೆಯೇ ದೊಡ್ಡ ಸಂಖ್ಯೆಯಲ್ಲಿ ಜನರು ಜಮಾಯಿಸಿದ್ದರು.

error: Content is protected !!