ಸ್ಪರ್ಧಾತ್ಮಕ ಪರೀಕ್ಷೆ: ನಿಷೇಧಾಜ್ಞೆ ಜಾರಿ

Spread the love

ಇದೇ ಜ.19 ಮತ್ತು 25ರಂದು ಕರ್ನಾಟಕ ಲೋಕಸೇವಾ ಆಯೋಗದ ವತಿಯಿಂದ ಗ್ರೂಪ್-ಬಿ ಉಳಿಕೆ ಮೂಲ ವೃಂದದಲ್ಲಿನ ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಪರೀಕ್ಷೆ ನಡೆಯುವ ದಿನದಂದು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.
ಪರೀಕ್ಷೆಯು ಚಿತ್ರದುರ್ಗ ನಗರದ 21 ವಿವಿಧ ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷಾ ದಿನದಂದು ಪರೀಕ್ಷಾ ಕೇಂದ್ರಗಳಲ್ಲಿನ ಅವ್ಯವಹಾರ ತಡೆಗಟ್ಟಲು ಪರೀಕ್ಷಾ ಕೇಂದ್ರಗಳ ಸುತ್ತ 200 ಮೀಟರ್ ಸಿ.ಆರ್.ಪಿ.ಸಿ. ಕಲಂ 144ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಈ ಪರೀಕ್ಷಾ ಕೇಂದ್ರಗಳ ವ್ಯಾಪ್ತಿಯಲ್ಲಿನ ಜೆರಾಕ್ಸ್ ಅಂಗಡಿ ಮತ್ತು ಕಂಪ್ಯೂಟರ್ ಇಂಟರ್‍ನೆಟ್ ಕೇಂದ್ರಗಳನ್ನು ಜ.19 ಮತ್ತು 25ರಂದು ಬೆಳಿಗ್ಗೆ 9 ರಿಂದ ಸಂಜೆ 5 ರವರಗೆ ಮುಚ್ಚುವಂತೆ ಮತ್ತು ಪರೀಕ್ಷಾ ಕೇಂದ್ರಗಳಿಗೆ ಅಭ್ಯರ್ಥಿಯು ಯಾವುದೇ ಕಾರಣಕ್ಕೂ ಮೊಬೈಲ್ ಫೋನ್ ಮತ್ತು ಎಲೆಕ್ಟ್ರಾನಿಕ್ ಉಪಕರಣಗಳನ್ನು ತರದಂತೆ ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಟಿ.ವೆಂಕಟೇಶ್ ಆದೇಶಿಸಿದ್ದಾರೆ.

error: Content is protected !!