ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರದ ಬದಲಿ ನಿವೇಶನ ಹಂಚಿಕೆ ಪ್ರಕರಣವು ಸಿಎಂ ಸಿದ್ದರಾಮಯ್ಯ ಅವರ ಕರ‍್ಚಿಯನ್ನು ಅಲುಗಾಡಿಸುತ್ತಿದೆ. ಈ ವಿಚಾರವಾಗಿ ಮಾತನಾಡಿರುವ ಸಿದ್ದರಾಮಯ್ಯ ಅವರು ಮುಡಾ ನಿವೇಶನ ಹಂಚಿಕೆ ಪ್ರಕರಣವನ್ನು ಸಿಬಿಐಗೆ ವಹಿಸುವ ಬಗ್ಗೆ ನನಗೆ ಆತಂಕವಿಲ್ಲ. ನ್ಯಾಯಾಲಯದಲ್ಲಿ ನಮಗೆ ನ್ಯಾಯ ಸಿಗುತ್ತದೆ ಎಂಬ ಭರವಸೆ ಇದೆ ಎಂದಿದ್ದಾರೆ.
ಜಾರಿ ನರ‍್ದೇಶನಾಯಲಯದವರು ನನ್ನ ಪತ್ನಿಗೆ ನೋಟೀಸ್ ಜಾರಿ ಮಾಡಿದ್ದು, ನ್ಯಾಯಾಲಯ ಅದಕ್ಕೆ ತಡೆಯಾಜ್ಞೆ ನೀಡಿದೆ. ಲೋಕಾಯುಕ್ತ ತನಿಖೆ ನಡೆಯುತ್ತಿದ್ದು, ಸಿಬಿಐಗೆ ಪ್ರಕರಣ ವಹಿಸುವ ಸಂಬಂಧ ನ್ಯಾಯಾಲಯದಲ್ಲಿ ವಾದ ನಡೆಯುತ್ತಿದೆ. ಈ ಹಂತದಲ್ಲಿ ಆತುರ ಮಾಡುವುದು ಸರಿಯಲ್ಲ ಎಂದು ನ್ಯಾಯಮರ‍್ತಿಗಳು ಹೇಳಿದ್ದಾರೆ. ಇ.ಡಿ ನೋಟೀಸ್ ಮಾತ್ರ ರಾಜಕೀಯ ಪ್ರೇರಿತ ಅಲ್ಲ, ಇಡೀ ಮುಡಾ ಪ್ರಕರಣವೇ ರಾಜಕೀಯ ಪ್ರೇರಿತ ಎಂದಿದ್ದಾರೆ.
ಮೈಸೂರಿನ ಮುಡಾ ಸೈಟು ಹಂಚಿಕೆಯಲ್ಲಿ ಅಕ್ರಮ ಆರೋಪ ಕೇಸ್ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಕೋರಿ ರ‍್ನಾಟಕ ಹೈಕರ‍್ಟ್‌ಗೆ ರ‍್ಜಿ ಸಲ್ಲಿಸಲಾಗಿತ್ತು. ರ‍್ಜಿ ವಿಚಾರಣೆ ನಡೆಸಿದ ಹೈಕರ‍್ಟ್ ಆದೇಶವನ್ನು ಕಾಯ್ದಿರಿಸಿದೆ. ಲೋಕಾಯುಕ್ತ ಪೊಲೀಸರು ಅಂತಿಮ ವರದಿ ಸಲ್ಲಿಕೆ ಮಾಡಲು ಗಡುವು ಕೂಡ ವಿಸ್ತರಿಸಿದೆ. ಈ ಹಿನ್ನೆಲೆ ಆದೇಶ ಕಾಯ್ದಿರಿಸಿರುವುದರಿಂದ ಸಿದ್ದರಾಮಯ್ಯ ಅವರು ಆತಂಕದಲ್ಲಿದ್ದಾರೆ ಎಂದು ಹೇಳಲಾಗುತ್ತಿತ್ತು. ಆದರೆ ಸಿದ್ದರಾಮಯ್ಯ ಅವರು ಈ ಕೇಸ್ ಸಿಬಿಐಗೆ ವಹಿಸಿದರೂ ಯಾವುದೇ ಆತಂಕವಿಲ್ಲ, ಕಾನೂನು ಹೋರಾಟ ಮುಂದುವರಿಸುವುದಾಗಿ ಸವಾಲೊಡ್ಡಿದ್ದಾರೆ. ರಾಜಕೀಯದಲ್ಲಿ ಬಿರುಗಾಳಿ ಎಬ್ಬಿಸಿದ್ದ ಮುಡಾ ಕೇಸ್ ತನಿಖೆಯನ್ನು ಲೋಕಾಯುಕ್ತಕ್ಕೆ ವಹಿಸಲಾಗಿತ್ತು. ಬಳಿಕ ದೂರುದಾರ ಸ್ನೇಹಮಯಿ ಕೃಷ್ಣ ಅವರು ಈ ಕೇಸ್ ಅನ್ನು ಸಿಬಿಐ ತನಿಖೆಗೆ ಕೊಡಬೇಕು ಎಂದು ಹೈಕರ‍್ಟ್‌ಗೆ ರ‍್ಜಿ ಸಲ್ಲಿಸಿದ್ದರು. ಈ ವಾದ ಪ್ರತಿವಾದವನ್ನು ಆಲಿಸಿರುವ ಹೈಕರ‍್ಟ್, ಆದೇಶವನ್ನು ಕಾಯ್ದಿರಿಸಿದೆ. ಅಲ್ಲದೆ ಲೋಕಾಯುಕ್ತ ವರದಿ ಸಲ್ಲಿಕೆಗೆ ನೀಡಿರುವ ಅವಧಿಯ ಗಡುವನ್ನು ಸಹ ವಿಸ್ತರಿಸಿದೆ.