ಪ್ರಧಾನಿ ನರೇಂದ್ರ ಮೋದಿಗೆ ಎಎಪಿ ಸಂಸ್ಥಾಪಕ ಹಾಗೂ ದೆಹಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಮತ್ತೆ ಪತ್ರ ಬರೆದಿದ್ದಾರೆ. ದೆಹಲಿ ವಿಧಾನಸಭೆ ಚುನಾವಣೆಗೆ ಇನ್ನು ಒಂದು ವಾರ ಮಾತ್ರ ಬಾಕಿ ಉಳಿದಿದೆ. ಈ ರೀತಿ ಇರುವಾಗಲೇ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಕೇಜ್ರಿವಾಲ್ ಮತ್ತೊಮ್ಮೆ ಪತ್ರ ಬರೆದಿದ್ದಾರೆ. ಕಳೆದ ಎರಡು ವಾರದ ಅವಧಿಯಲ್ಲಿ ಕೇಜ್ರಿವಾಲ್ ಸರಣಿ ಪತ್ರಗಳನ್ನು ಬರೆದಿದ್ದಾರೆ.
ದೆಹಲಿ ವಿಧಾನಸಭೆ ಚುನಾವಣೆ ಫೆಬ್ರವರಿ ೫ರಂದು ನಡೆಯಲಿದೆ. ಈಗಾಗಲೇ ದೆಹಲಿ ಚುನಾವಣೆಗೆ ಸಂಬಂಧಿಸಿದಂತೆ ಎಲ್ಲಾ ರಾಜಕೀಯ ಪಕ್ಷಗಳು ಅಂತಿಮ ಕಸರತ್ತು ನಡೆಸಿವೆ. ಇದರ ನಡುವೆ ಅರವಿಂದ್ ಕೇಜ್ರಿವಾಲ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಕೆಣಕುವುದನ್ನು ಮುಂದುವರಿಸಿದ್ದಾರೆ.
ಹೌದು ದೆಹಲಿ ವಿಧಾನಸಭೆ ಚುನಾವಣೆಗೆ ಎಲ್ಲಾ ರಾಜಕೀಯ ಪಕ್ಷಗಳು ಕಸರತ್ತು ನಡೆಸಿವೆ. ಈ ಬಾರಿ ದೆಹಲಿಯಲ್ಲಿ ಎಎಪಿ ಅಧಿಕಾರಕ್ಕೆ ಬರುವುದು ರ‍್ಕಸ್ ಅಂತಲೇ ಹೇಳಲಾಗುತ್ತಿದೆ. ಕಳೆದ ಎರಡು ವಾರದಿಂದ ಕೇಜ್ರಿವಾಲ್ ಅವರು ಸರಣಿ ಪತ್ರಗಳನ್ನು ಬರೆಯುತ್ತಿದ್ದು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಮನವಿ ಮಾಡುತ್ತಿದ್ದಾರೆ. ಇದರ ಉದ್ದೇಶದ ಈ ಬಾರಿ ದೆಹಲಿಯಲ್ಲಿ ಎಎಪಿ – ಬಿಜೆಪಿ ನಡುವೆ ನೇರ ಹಣಾಹಣಿ ಇದೆ. ನಾವು ಮನವಿ ಮಾಡಿದರೂ ಕೇಂದ್ರ ಬಿಜೆಪಿ ರ‍್ಕಾರ ನಮ್ಮ ಮನವಿಗಳಿಗೆ ಸ್ಪಂದಿಸಿಲ್ಲ ಎಂದು ತೋರಿಸುವುದಕ್ಕೆ ಎಎಪಿ ರ‍್ಕಸ್ ಮಾಡುತ್ತಿದೆ. ಇದರ ಭಾಗವಾಗಿ ಕಳೆದ ಒಂದು ತಿಂಗಳಿನಿಂದಲೂ ಎಎಪಿ ಸಂಸ್ಥಾಪಕ ಅರವಿಂದ್ ಕೇಜ್ರಿವಾಲ್ ಅವರು ಸರಣಿ ಪತ್ರಗಳನ್ನು ಬರೆದಿದ್ದಾರೆ.